ಕರಾವಳಿ ವಾಯ್ಸ್ ನ್ಯೂಸ್ 

ಹೊನ್ನಾವರ: ತಾಲೂಕಿನ ಚಿಕ್ಕನಕೋಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕೊಳ್ಳಿ ಸಮೀಪ ತಿರುವಿನಲ್ಲಿ ಸ್ಕೂಟಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.

Banner Ad

ಶಿರಸಿ ತಾಲೂಕಿನ ಅಮ್ಮಿನಹಳ್ಳಿ ನಿವಾಸಿ ಕೃಷ್ಣ ಗೌಡ (ಮೃತರು) ಹಾಗೂ ಮಂಜು ಈರ ಗೌಡ ಅವರು ಶಿರಸಿಯಿಂದ ಸ್ಕೂಟಿಯಲ್ಲಿ ಹೊಸಗೋಡಿನಲ್ಲಿರುವ ಸಂಬಂಧಿಕರ ಮನೆಗೆ ತೆರಳುತ್ತಿದ್ದಾಗ ಚಿಕ್ಕೊಳ್ಳಿ ಸಮೀಪದ ತಿರುವಿನಲ್ಲಿ ಸ್ಕೂಟಿ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದೆ.

ಅಪಘಾತದ ತೀವ್ರತೆಗೆ ಕೃಷ್ಣ ಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿಂಬದಿ ಸವಾರ ಮಂಜು ಈರ ಗೌಡ ಅವರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಾಹಿತಿ ತಿಳಿದು ಹೊನ್ನಾವರ ಪೊಲೀಸ್ ಠಾಣೆಯ ಪಿಐ ಸಿದ್ದರಾಮೇಶ್ವರ ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

 

 

 

Please Share: