ಕರಾವಳಿ ವಾಯ್ಸ್ ನ್ಯೂಸ್ 

ಅಂಕೋಲಾ: ತಾಲೂಕಿನ ಸರಳೆಬೈಲ್ ಬಳಿ ಸೋಮವಾರ ಬೆಳಿಗ್ಗೆ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಡಿಕ್ಕಿಯ ತೀವ್ರತೆಗೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

Banner Ad

ಕಾರವಾರದಿಂದ ಅಂಕೋಲಾ ಮಾರ್ಗವಾಗಿ ಹುಬ್ಬಳ್ಳಿಗೆ ತೆರಳುತ್ತಿದ್ದ ಬಸ್, ಬೆಳಿಗ್ಗೆ ಸುಮಾರು 7.45ರ ವೇಳೆಗೆ ಅಗಸೂರು ದಾಟಿ ಸರಳೆಬೈಲ್ ತಲುಪುತ್ತಿದ್ದಂತೆ ಟ್ಯಾಂಕರ್‌ಗೆ ಡಿಕ್ಕಿಯಾಗಿದೆ ಎನ್ನಲಾಗಿದೆ.

ಅಪಘಾತದಲ್ಲಿ ಕೆಲವರು ಗಾಯಗೊಂಡಿರುವ ಮಾಹಿತಿ ಲಭ್ಯವಾಗಿದ್ದು, ಗಾಯಾಳುಗಳ ಸಂಖ್ಯೆ, ಹಾಗೂ ಅಪಘಾತದ ನಿಖರ ಕಾರಣ ತಿಳಿದುಬರಬೇಕಿದೆ.

ಸ್ಥಳಕ್ಕೆ ಅಂಕೋಲಾ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ.

 

 

Please Share: