ಕರಾವಳಿ ವಾಯ್ಸ್ ನ್ಯೂಸ್
ಬ್ಯಾಡಗಿ: ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಗಿನೆಲೆ ಗ್ರಾಮದ ದೊಡ್ಡ ಕೆರೆಯಲ್ಲಿ ಕುರಿಗಳಿಗೆ ನೀರು ಕುಡಿಸಲು ತೆರಳಿದ್ದ ವ್ಯಕ್ತಿಯೊಬ್ಬರು ಕೆರೆಯಲ್ಲಿ ಬಿದ್ದು ಮೃತಪಟ್ಟ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಸಂತೋಷ್ ಪರ್ಸಪ್ಪ ಮತ್ತುರ್ ಮೃತಪಟ್ಟ ವ್ಯಕ್ತಿ ಎಂದು ತಿಳಿದುಬಂದಿದೆ. ಬುಧವಾರ ಬೆಳಿಗ್ಗೆ ಸುಮಾರು 10 ಗಂಟೆಗೆ ಕುರಿಗಳಿಗೆ ನೀರು ಕುಡಿಸಲು ಕಾಗಿನೆಲೆ ಗ್ರಾಮದ ದೊಡ್ಡ ಕೆರೆಗೆ ತೆರಳಿದ್ದ ವೇಳೆ, ಕೆರೆಯಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣಗೊಂಡಿದ್ದ ಆಳವಾದ ಗುಂಡಿಯಲ್ಲಿ ಕಾಲು ಜಾರಿ ಬಿದ್ದು ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ಕೆರೆಯ ಕಾಮಗಾರಿಯನ್ನು ವೈಜ್ಞಾನಿಕವಾಗಿ ಕೈಗೊಳ್ಳಬೇಕು ಹಾಗೂ ಇಂತಹ ಅವಘಡಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂಬ ಆಗ್ರಹ ವ್ಯಕ್ತವಾಗಿದೆ.


