ಶಿರಸಿ: ಕನ್ನಡ ಸಿನಿರಂಗದ ಖ್ಯಾತ ನಟ, ಕರುನಾಡ ಚಕ್ರವರ್ತಿ ಹಾಗೂ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಪತ್ನಿ ಗೀತಾ ಶಿವರಾಜ್ ಕುಮಾರ್ ಸಮೇತರಾಗಿ ಶುಕ್ರವಾರ (ಸೆ.26) ಶಿರಸಿಯ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ನಾಡದೇವಿ ಶ್ರೀ ಮಾರಿಕಾಂಬಾ ದೇವಿಯ ಅಪ್ಪಟ ಭಕ್ತರಾಗಿರುವ ಶಿವರಾಜ್ ಕುಮಾರ್ ದಂಪತಿಗಳು ದೇವಿಯ ದರ್ಶನ ಪಡೆದು ಆಶೀರ್ವಾದ ಕೋರಿದರು. ಬಳಿಕ ಅವರು ಶಾಲ್ಮಲಾ ನದಿಯ ಸಹಸ್ರಲಿಂಗಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಉಪಾಧ್ಯಕ್ಷ ಸುದೇಶ ಜೋಗಳೆಕರ್, ಧರ್ಮದರ್ಶಿ ಸುದೀರ ಹಂದ್ರಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.


