ಕರಾವಳಿ ವಾಯ್ಸ್ ನ್ಯೂಸ್ 

ಕಾರವಾರ, ಏಪ್ರಿಲ್ 24: ಆರ್ಟಿಒ ಅಧಿಕಾರಿ ಕೂತಿದ್ದಾಗಲೇ ನಗರದ ಪ್ರಾದೇಶಿಕ ಸಾರಿಗೆ ಕಚೇರಿ (ಆರ್ಟಿಒ)ಯ ಚೇಂಬರ್‌ನಲ್ಲಿ ಶುಕ್ರವಾರ ಮಧ್ಯಾಹ್ನ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಘಟನೆ ನಡೆದಿದೆ.

Banner Ad

ಮಧ್ಯಾಹ್ನ ವೇಳೆಯಲ್ಲಿ ಕಚೇರಿಯಲ್ಲಿನ ಕಂಪ್ಯೂಟರ್ ಹಾಗೂ ಫ್ಯಾನ್ ಸ್ವಿಚ್ ಹಾಕುತ್ತಿದ್ದಂತೆಯೇ ಏಕಾಏಕಿ ವಿದ್ಯುತ್ ತಂತಿಗಳಲ್ಲಿ ಸ್ಪಾರ್ಕ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚರಗೊಂಡ ಸಿಬ್ಬಂದಿ ಕಂಪ್ಯೂಟರ್‌ಗಳ ಸಂಪರ್ಕವನ್ನು ಕಡಿತಗೊಳಿಸಿ ಅನಾಹುತವನ್ನು ತಪ್ಪಿಸಿದ್ದಾರೆ.

ಘಟನೆಯ ವೇಳೆ ಚೇಂಬರ್‌ನಲ್ಲೇ ಇದ್ದ ಆರ್ಟಿಒ ಅಧಿಕಾರಿ ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

ಬಳಿಕ ಸಾಮಾಜಿಕ ಕಾರ್ಯಕರ್ತ ರಾಘು ನಾಯ್ಕ ಹಾಗೂ ಇತರ ಅಧಿಕಾರಿಗಳು ಘಟನೆಯ ಬಗ್ಗೆ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ವಿದ್ಯುತ್ ಸಂಪರ್ಕದ ದೋಷವೇ ಘಟನೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದ್ದು, ಪರಿಶೀಲನೆ ನಡೆಸುವ ಸಾಧ್ಯತೆ ಇದೆ.

 

Please Share: