ಕರಾವಳಿ ವಾಯ್ಸ್ ನ್ಯೂಸ್
ಗೋಕರ್ಣ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಮುಖ್ಯ ಕಡಲ ತೀರದ ಸಮೀಪದ ಪಾರ್ಕಿಂಗ್ ಸ್ಥಳದಲ್ಲಿ ಪ್ರವಾಸಕ್ಕೆ ಬಂದಿದ್ದ ಐದು ವರ್ಷದ ಮಗುವಿಗೆ ನಾಗರಹಾವು ಕಡಿದ ಘಟನೆ ನಡೆದಿದೆ.
ಧಾರವಾಡ ಮೂಲದ ಮಗು ಹಾವಿನ ಕಡಿತಕ್ಕೆ ಒಳಗಾಗಿದ್ದು, ತಕ್ಷಣ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಘಟನೆಯ ಮಾಹಿತಿ ತಿಳಿದ ಗೋಕರ್ಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಉರಗ ರಕ್ಷಕರನ್ನು ಕರೆಸಿ ನಾಗರಹಾವನ್ನು ಸೆರೆಹಿಡಿಯುವ ಕಾರ್ಯಾಚರಣೆ ನಡೆಸಿದರು.
ಈ ಘಟನೆ ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಗುವಿನ ಆರೋಗ್ಯದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.


