ಹೊನ್ನಾವರ: ತಾಲೂಕಿನ ಹಳದೀಪುರ ಕಲ್ಕಟ್ಟೆ ಬಳಿ ರೈಲಿಗೆ ತಲೆಕೊಟ್ಟು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.

ಮೃತನನ್ನು ಹಳದೀಪುರ ಸಾಲಿಕೇರಿಯ ಗುಂದಾ ನಿವಾಸಿ ಹನುಮಂತ ತಿಮ್ಮು ಗೌಡ (42) ಎಂದು ಗುರುತಿಸಲಾಗಿದೆ. ಐದು ವರ್ಷಗಳ ಹಿಂದೆ ಪತ್ನಿ ಸಾವಿಗೀಡಾದ ಬಳಿಕ ಆತನು ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು, ಹೊನ್ನಾವರದ ಸೇಂಟ್ ಇಗ್ನೇಶಿಯಸ್ ಆಸ್ಪತ್ರೆಗೆ ಚಿಕಿತ್ಸೆ ಪಡೆಯುತ್ತಿದ್ದರೂ ಆರೋಗ್ಯದಲ್ಲಿ ಚೇತರಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ.

ಈ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ ಮಂಗಳೂರಿನಿಂದ ಮಡಗಾವ್ ಕಡೆಗೆ ತೆರಳುತ್ತಿದ್ದ ಗೂಡ್ಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನೆಯ ಬಗ್ಗೆ ಮೃತನ ಅಣ್ಣ ಮಾದೇವ ತಿಮ್ಮು ಗೌಡ ಹೊನ್ನಾವರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

Please Share: