ಕರಾವಳಿ ವಾಯ್ಸ್ ನ್ಯೂಸ್
ಶಿರಸಿ: ಸಂತೆ ಸಮಯದ ಗದ್ದಲವನ್ನು ಸದುಪಯೋಗ ಮಾಡಿಕೊಂಡ ಕಳ್ಳರು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ ಅನ್ನು ಎಗರಿಸಿರುವ ಘಟನೆ ತಾಲೂಕಿನ ದಾಸನಕೊಪ್ಪದಲ್ಲಿ ನಡೆದಿದೆ.
ಆದ್ನಳ್ಳಿ ಕಾಟೇಮನೆ ನಿವಾಸಿ ಮಂಜುನಾಥ (40) ಅವರು ಈ ಕುರಿತು ಬನವಾಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಮಂಜುನಾಥ ಅವರು ಮಾರ್ಚ್ 15ರಂದು ಮಧ್ಯಾಹ್ನ 3.30ರ ಸುಮಾರಿಗೆ ತಮ್ಮ ಹಿರೋ ಫ್ಯಾಷನ್ ಎಕ್ಸ್‌ಪ್ರೋ (ಕೆಎ 31/ಇಬಿ 5315) ಬೈಕ್‌ನಲ್ಲಿ ದಾಸನಕೊಪ್ಪ ಸಂತೆಗೆ ತೆರಳಿ, ಶಿರಸಿ–ಹಾವೇರಿ ರಸ್ತೆಯ ಪಕ್ಕದಲ್ಲಿ ವಾಹನವನ್ನು ನಿಲ್ಲಿಸಿದ್ದರು. ಸಂಜೆ 5 ಗಂಟೆಗೆ ಮನೆಗೆ ತೆರಳಲು ಬಂದಾಗ ಬೈಕ್ ಕಾಣೆಯಾಗಿರುವುದು ಗಮನಕ್ಕೆ ಬಂದಿದೆ.
ಮಧ್ಯಾಹ್ನ 3.30ರಿಂದ ಸಂಜೆ 5 ಗಂಟೆಯ ನಡುವಿನ ಅವಧಿಯಲ್ಲಿ ಅಪರಿಚಿತರು ಬೈಕ್ ಕಳ್ಳತನ ಮಾಡಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ.
ಈ ಕುರಿತು ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ
