ಕರಾವಳಿ ವಾಯ್ಸ್ ನ್ಯೂಸ್

ಕುಮಟಾ: ಗೋಕರ್ಣದ ಕರಿಯಪ್ಪನ ಕಟ್ಟೆಯ ಬಳಿ ಸೋಮವಾರ ಸಂಜೆ ನಡೆದ ದುರಂತದಲ್ಲಿ ಒಬ್ಬ ಯುವಕ ಸಮುದ್ರದ ಅಲೆಗಳಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ಕರ್ನೂಲ–ಆಂಧ್ರಪ್ರದೇಶ ಮೂಲದ ಮಹಮ್ಮದ್ ಇಮ್ರಾನ್ ದುಬ್ಬಣಶಶಿ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ತನ್ನ ಗೆಳೆಯರೊಂದಿಗೆ ಪ್ರವಾಸಕ್ಕಾಗಿ ಗೋಕರ್ಣಕ್ಕೆ ಬಂದಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಈಜುವಾಗ ಅಲೆಗಳ ಒತ್ತಡಕ್ಕೆ ಸಿಲುಕಿ ಅವರು ಕಾಣೆಯಾಗಿರುವುದು ತಿಳಿದುಬಂದಿದೆ. ನಂತರ ಹುಡುಕಾಟದಲ್ಲಿ ದುಬ್ಬಣಶಶಿ ಬಳಿ ಶವ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ಗೋಕರ್ಣ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದು, ಮುಂದಿನ ಕ್ರಮಕ್ಕಾಗಿ ಮೃತದೇಹವನ್ನು ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಪೊಲೀಸರು ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.

 

Please Share: