ಕರಾವಳಿ ವಾಯ್ಸ್ ನ್ಯೂಸ್ 

ಕುಮಟಾ: ತಾಲೂಕಿನ ಗೋಕರ್ಣ ಸಮೀಪದ ತದಡಿ ಬಂದರಿನಲ್ಲಿ ಮಂಗಳವಾರ ಸಂಜೆ ಬೋಟ್‌ನಲ್ಲಿದ್ದ ಮೀನು ಸಂಗ್ರಹದ ಸ್ಥಳವನ್ನು ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಮೂವರು ಮೀನುಗಾರರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರನ್ನು ರಕ್ಷಿಸಲಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.

Banner Ad

ಮೃತರನ್ನು ನೌಶಾದ್ (48), ಅಮೀನ್ (40) ಹಾಗೂ ಅಮನ್ (26) ಎಂದು ಗುರುತಿಸಲಾಗಿದೆ. ಇವರು ತದಡಿಯ ಕುಚೈಮಾ ಬೋಟ್‌ನಲ್ಲಿ ಕೆಲಸ ಮಾಡುತ್ತಿದ್ದರು.

ಚಮನ್ ಮೀನು ಹಿಡಿದು ಬಂದರಿಗೆ ಮರಳಿದ್ದ ಮೀನುಗಾರರು, ಬೋಟ್‌ನಲ್ಲಿದ್ದ ಮೀನುಗಳನ್ನು ಖಾಲಿ ಮಾಡಿದ ಬಳಿಕ ಮೀನು ಸಂಗ್ರಹಿಸುವ ಸ್ಥಳವನ್ನು ಸ್ವಚ್ಛಗೊಳಿಸಲು ಒಳಗೆ ಇಳಿದಿದ್ದರು. ಈ ವೇಳೆ ಅಲ್ಲಿ ಸಂಗ್ರಹವಾಗಿದ್ದ ವಿಷಕಾರಿ ಅನಿಲ ಅಥವಾ ವಾಸನೆಯಿಂದ ಉಸಿರುಗಟ್ಟಿ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಘಟನೆಯಲ್ಲಿ ಇಬ್ಬರನ್ನು ರಕ್ಷಿಸಲಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಈ ಕುರಿತು ಗೋಕರ್ಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

 

Please Share: