ಕರಾವಳಿ ವಾಯ್ಸ್ ನ್ಯೂಸ್ 

ಕಲಬುರಗಿ:                

Banner Ad

ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು ವಿಮಾನವೊಂದು ತೊಗರಿ ಹೊಲದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ಮಂಗಳವಾರ ಸಂಜೆ ಕಲಬುರಗಿಯಲ್ಲಿ ನಡೆದಿದೆ.

ನಗರದ ಸೇಡಂ ರಸ್ತೆಯಲ್ಲಿರುವ ವಿಮಾನ ನಿಲ್ದಾಣದ ಸಮೀಪ ಈ ಘಟನೆ ಸಂಭವಿಸಿದ್ದು, ತಾಂತ್ರಿಕ ದೋಷದಿಂದಾಗಿ ವಿಮಾನವನ್ನು ತೊಗರಿ ಜಮೀನಿನಲ್ಲಿ ತುರ್ತಾಗಿ ಇಳಿಸಲಾಗಿದೆ. ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿಮಾನ ನಿಲ್ದಾಣದ ಸಮೀಪವೇ ಘಟನೆ ನಡೆದಿರುವುದರಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

 

 

Please Share: