ಕರಾವಳಿ ವಾಯ್ಸ್ ನ್ಯೂಸ್
ಶಿರಸಿ: ತಾಲೂಕಿನ ಬಿಸಿಲಕೊಪ್ಪ ಸಮೀಪ ಶುಕ್ರವಾರ ರಸ್ತೆ ಬದಿಯಲ್ಲಿದ್ದ ಮರ ಏಕಾಏಕಿ ಉರುಳಿ ಟಾಟಾ ಇಂಟ್ರಾ ವಾಹನದ ಮೇಲೆ ಬಿದ್ದ ಪರಿಣಾಮ ವಾಹನಕ್ಕೆ ಹಾನಿಯಾಗಿದ್ದು, ಚಾಲಕ ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ಮಾಹಿತಿಯ ಪ್ರಕಾರ, ಗಿರೀಶ್ ಅವರಿಗೆ ಸೇರಿದ ಟಾಟಾ ಇಂಟ್ರಾ ವಾಹನ ರಸ್ತೆ ಮೂಲಕ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಮರ ವಾಹನದ ಮೇಲೆ ಬಿದ್ದಿದೆ. ಪರಿಣಾಮ ವಾಹನದ ಮುಂಭಾಗಕ್ಕೆ ಹಾನಿಯಾಗಿದ್ದು, ಚಾಲಕ ಸಮಯಪ್ರಜ್ಞೆಯಿಂದ ಅಪಾಯದಿಂದ ಪಾರಾಗಿದ್ದಾರೆ.
ಘಟನೆಯ ಮಾಹಿತಿ ದೊರಕುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮರವನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದರು. ಬಳಿಕ ರಸ್ತೆಯಲ್ಲಿದ್ದ ಅಡಚಣೆಯನ್ನು ನಿವಾರಿಸಿ ವಾಹನಗಳ ಸಂಚಾರವನ್ನು ಪುನಃ ಸುಗಮಗೊಳಿಸಿದರು.
ಅಗ್ನಿಶಾಮಕ ಠಾಣಾಧಿಕಾರಿ ರಾಜೇಶ್ ರಾಣೆ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಜಯರಾಮ, ಸುನಿಲ್, ದುಂಡಪ್ಪ, ಜುಬೇರ್ ಹಾಗೂ ಇತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
