ಕರಾವಳಿ ವಾಯ್ಸ್ ನ್ಯೂಸ್ 

ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಶನಿವಾರ ಏಕಕಾಲಕ್ಕೆ ಎರಡು ಪ್ರತ್ಯೇಕ ಲಾರಿ ಅಪಘಾತ ಸಂಭವಿಸಿದ್ದು, ಸಂಚಾರ ಅಸ್ತವ್ಯಸ್ತಗೊಂಡಿದೆ.

Banner Ad

ಬಳಗಾರ ಕ್ರಾಸ್‌ ಬಳಿ ಸರಕು ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾಗಿದೆ. ಇದೇ ವೇಳೆ ಆರತಿಬೈಲ್ ಘಟ್ಟದಲ್ಲೂ ಮತ್ತೊಂದು ಲಾರಿ ನಿಯಂತ್ರಣ ತಪ್ಪಿ ಗಟಾರಕ್ಕೆ ಇಳಿದಿದೆ.

ಎರಡು ಕಡೆ ಅಪಘಾತ ಸಂಭವಿಸಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಕಿಲೋಮೀಟರ್‌ಗಟ್ಟಲೆ ವಾಹನಗಳ ಸಾಲು ನಿರ್ಮಾಣವಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಗಿದೆ. ಸ್ಥಳಕ್ಕೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ತೆರಳಿ ವಾಹನಗಳ ಸಂಚಾರ ಸುಗಮಗೊಳಿಸುವ ಕಾರ್ಯ ನಡೆಸುತ್ತಿದ್ದಾರೆ.

 

 

 

 

 

 

 

 

 

Please Share: