ಕರಾವಳಿ ವಾಯ್ಸ್ ನ್ಯೂಸ್ 

ಗೋಕರ್ಣ: ಸಮುದ್ರದ ಸುಳಿಗೆ ಸಿಲುಕಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ಗೋಕರ್ಣದ ಕುಡ್ಲೆ ಕಡಲ ತೀರದಲ್ಲಿ ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್ ಸಿಬ್ಬಂದಿಗಳು ಸಮಯಪ್ರಜ್ಞೆಯಿಂದ ರಕ್ಷಿಸಿದ್ದಾರೆ.

Banner Ad

ಕುಮಟಾ ತಾಲೂಕಿನ ಗೋಕರ್ಣದ ಕುಡ್ಲೆ ಬೀಚ್‌ನಲ್ಲಿ ದೇವರಾಜ್ (24) ಹಾಗೂ ಅರವಿಂದ (25) ಎಂಬ ಪ್ರವಾಸಿಗರು ಸಮುದ್ರದ ಸುಳಿಗೆ ಸಿಲುಕಿ ಕೊಚ್ಚಿಹೋಗುತ್ತಿದ್ದರು. ಇದನ್ನು ಗಮನಿಸಿದ ಗೋಕರ್ಣ ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್ ಸಿಬ್ಬಂದಿಗಳು ತಕ್ಷಣ ಜೆಟ್ ಸ್ಕೀ ಮೂಲಕ ಸಮುದ್ರಕ್ಕೆ ತೆರಳಿ ಇಬ್ಬರನ್ನೂ ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದಾರೆ.

ಸಮಯಕ್ಕೆ ಸರಿಯಾಗಿ ಕಾರ್ಯಪ್ರವೃತ್ತರಾದ ಸಿಬ್ಬಂದಿಗಳ ತ್ವರಿತ ಕಾರ್ಯಾಚರಣೆಯಿಂದ ಇಬ್ಬರು ಪ್ರವಾಸಿಗರ ಪ್ರಾಣಾಪಾಯ ತಪ್ಪಿದೆ. ಸಿಬ್ಬಂದಿಗಳ ಸಮಯಪ್ರಜ್ಞೆ ಹಾಗೂ ಸಾಹಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

 

 

 

 

 

Please Share: