ಕರಾವಳಿ ವಾಯ್ಸ್ ನ್ಯೂಸ್ 

ಮುಂಡಗೋಡ: ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟ ಘಟನೆ ತಾಲೂಕಿನ ಮಳಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೋರನಗುಡ್ಡ ಗ್ರಾಮದಲ್ಲಿ ನಡೆದಿದೆ.

Banner Ad

ಮೃತ ಮಹಿಳೆಯನ್ನು ಜ್ಯೋತಿ ಜಾಧವ (32) ಎಂದು ಗುರುತಿಸಲಾಗಿದೆ.

ಜ್ಯೋತಿ ಅವರು ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದು, ತಕ್ಷಣ ಅವರನ್ನು ಶಿರಸಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

ಇದೇ ವೇಳೆ ಪತ್ನಿಯನ್ನು ರಕ್ಷಿಸಲು ಮುಂದಾದ ಪತಿ ಕೃಷ್ಣ ಜಾಧವ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರ ಎರಡು ಕಣ್ಣುಗಳು ಸೇರಿದಂತೆ ದೇಹದ ಹಲವು ಭಾಗಗಳು ಸುಟ್ಟಿದ್ದು, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು, ಮೃತಳ ಸಹೋದರ ಗಣಪತಿ ಅವರು ತಮ್ಮ ಸಹೋದರಿ ಜ್ಯೋತಿ ಅವರ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಸಮಗ್ರ ತನಿಖೆ ನಡೆಸುವಂತೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

 

Please Share: