ಕರಾವಳಿ ವಾಯ್ಸ್ ನ್ಯೂಸ್ 

ಹೊನ್ನಾವರ: ಪ್ರೇಮ ವೈಫಲ್ಯದಿಂದ ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಾಸರಕೋಡ ರಾಮನಗರದ ಬಳಿ ಬುಧವಾರ ನಡೆದಿದೆ.

ಹರೀಶ ಗಣಪತಿ ಮೇಸ್ತಾ (24) ಮೃತ ಯುವಕ. ಅವರು ವೃತ್ತಿಯಲ್ಲಿ ಚಾಲಕರಾಗಿದ್ದರು.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಹರೀಶ ಅವರು ಯುವತಿಯೊಬ್ಬರನ್ನು ಪ್ರೀತಿಸುತ್ತಿದ್ದು, ಮದುವೆಯಾಗುವ ಉದ್ದೇಶ ಹೊಂದಿದ್ದರು. ಆದರೆ ಕೆಲ ಸಮಯದ ಬಳಿಕ ಯುವತಿ ಅವರಿಂದ ದೂರವಾದ ಹಿನ್ನೆಲೆಯಲ್ಲಿ ಅವರು ತೀವ್ರ ಮನನೊಂದು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಘಟನೆ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿನ ನಿಖರ ಕಾರಣ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

 

Please Share: