ಶಿರಸಿ: ಎಲ್ ಪಿಜಿ ಸಿಲಿಂಡರ್ ಸ್ಫೋಟಗೊಂಡು ಯುವತಿ ಸಾವನ್ನಪ್ಪಿರುವ ದಾರುಣ ಘಟನೆ ತಾಲೂಕಿನ ಬೆಂಡೆಗದ್ದೆ ಸಮೀಪದ ಮರ್ಕಿಕೊಡ್ಲು ಗ್ರಾಮದ ಹಲಗೆಯಲ್ಲಿ ಮಂಗಳವಾರ ಸಂಜೆ ನಡೆದಿದೆ.

ರಂಜಿತಾ ನಾಗಪ್ಪ ದೇವಾಡಿಗ (21) ಮೃತ ಯುವತಿ. ಅನಾರೋಗ್ಯದ ಕಾರಣದಿಂದಾಗಿ ರಂಜಿತಾ ಮನೆಯಲ್ಲಿದ್ದರು. ತಂದೆ-ತಾಯಿ ಕೆಲಸಕ್ಕೆಂದು ಹೊರ ಹೋಗಿದ್ದರು. ಈ ವೇಳೆ ಮನೆಯಲ್ಲಿದ್ದ ಸಿಲಿಂಡರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದ್ದು, ಯುವತಿ ಸಾವನ್ನಪ್ಪಿದ್ದಾರೆ.

ಘಟನೆ ಸಂಭವಿಸಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೋಲಿಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಿಸಲು ಪ್ರಯತ್ನಿಸಿದರು. ಸ್ಫೋಟಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

 

Please Share: