ಕರಾವಳಿ ವಾಯ್ಸ್ ನ್ಯೂಸ್

ಅಂಕೋಲಾ: ತಾಲೂಕಿನ ವ್ಯಾಪ್ತಿಯಲ್ಲಿ ಮತ್ತೊರ್ವ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಹಸಲ್ಗದ್ದೆ ಸಮೀಪದ ಬೆಟ್ಟ ಪ್ರದೇಶದಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವಕನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೃತನನ್ನು ಅಂಕೋಲಾದ ನಾರಾಯಣ ಪಾಂಡು ಹುಲಸ್ವಾರ ಎಂದು ಗುರುತಿಸಲಾಗಿದೆ. ಈತ ಕುಡಿತದ ಚಟಕ್ಕೆ ಒಳಗಾಗಿದ್ದನೆಂದು ತಿಳಿದು ಬಂದಿದ್ದು, ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.

ನಾಲ್ಕೈದು ದಿನಗಳ ಹಿಂದೆಯೇ ಈ ಘಟನೆ ನಡೆದಿರಬಹುದೆಂದು ಅಂದಾಜಿಸಲಾಗಿದ್ದು, ಸ್ಥಳೀಯರಿಗೆ ದುರ್ವಾಸನೆ ಹರಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಮಾಹಿತಿ ಪಡೆದ ಅಂಕೋಲಾ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ.

ಇತ್ತೀಚಿನ ದಿನಗಳಲ್ಲಿ ತಾಲೂಕಿನ ವ್ಯಾಪ್ತಿಯಲ್ಲಿ ಆತ್ಮಹತ್ಯೆ ಪ್ರಕರಣಗಳು ಆತಂಕಕಾರಿ ರೀತಿಯಲ್ಲಿ ಹೆಚ್ಚಾಗುತ್ತಿವೆ. ಇತ್ತೀಚೆಗಷ್ಟೇ ಪಟ್ಟಣದ ಹಸಲ್ಗದ್ದೆ ಪ್ರದೇಶದ ಯುವಕನೋರ್ವ ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಜನರಲ್ಲಿ ಆತಂಕ ಮೂಡಿಸಿದೆ.

 

 

Please Share: